ಸುದ್ದಿ ಸಮಾಚಾರ:
ಡಾ. ಹೆಚ್ ಎಸ್ ವೆಂಕಟೇಶ ಮೂರ್ತಿಯವರನ್ನು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅಭಿನಂದಿಸಿದ ಕ್ಷಣ. - ಹೆಚ್ಚಿನ ಮಾಹಿತಿಗೆ | ವಿವಿಧ ಕೃತಿಗಳ ಲೋಕಾರ್ಪಣೆ ಸಮಾರಂಭದ ಚಿತ್ರಗಳು ಮತ್ತು ವೀಡಿಯೊ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019 - ಅರ್ಜಿ ನಮೂನೆ

ಪ್ರಕಟಿತ ವರ್ಷ : 07 Sep 2019 05:46 pm

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 29.09.2019 ರಿಂದ 07.10.2019ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು  ಇಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2,000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ  ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಂದರೆ www.kannadapustakapradhikara.com ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. 

 

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:21.09.2019 ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

 ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ,
ಜೆ.ಸಿ.ರಸ್ತೆ,
ಬೆಂಗಳೂರು-560 002
ದೂ:080-22484516/22107704 ಅನ್ನು ಸಂಪರ್ಕಿಸಬಹುದಾಗಿದೆ.